HomeLatest Newsಪ್ರದರ್ಶನದ ಪುಷ್ಪಗಳು ಮರುಬಳಕೆಯ ವಸ್ತುಗಳಾಗಬೇಕು: ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್

ಪ್ರದರ್ಶನದ ಪುಷ್ಪಗಳು ಮರುಬಳಕೆಯ ವಸ್ತುಗಳಾಗಬೇಕು: ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್

ಬೆಂಗಳೂರು: ಫಲ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿರುವ ಪುಷ್ಪಗಳನ್ನು ತ್ಯಾಜ್ಯವಾಗಿಸದೇ ಅವುಗಳನ್ನು ಒಣಗಿಸಿ ಅಥವಾ ಸಂಸ್ಕರಿಸಿ ಮರುಬಳಕೆಗೆ ಯೋಗ್ಯವಾದ ವಸ್ತುಗಳನ್ನು ತಯಾರಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಸೂಚಿಸಿದರು.

ತೋಟಗಾರಿಕೆ ಇಲಾಖೆಯಿಂದ ನಗರದ ಶ್ರೀ ಚಾಮರಾಜೇಂದ್ರ (ಕಬ್ಬನ್) ಉದ್ಯಾನವನದಲ್ಲಿ 11 ದಿನಗಳ ಕಾಲ ಏರ್ಪಡಿಸಿರುವ “ಹೂಗಳ ಹಬ್ಬ-2025” ಕಲೆ ಸಂಸ್ಕೃತಿಯ ಸಮಾಗಮ ಉದ್ಘಾಟಿಸಿ ಫಲ ಪುಷ್ಪ ಪ್ರದರ್ಶನ ವೀಕ್ಷಿಸಿದರು.

ತೋಟಗಾರಿಕೆ ಇಲಾಖೆಯು ವಿಶೇಷವಾಗಿ ಮಕ್ಕಳಿಗಾಗಿ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ನಮ್ಮ ಜೀವನ ಶೈಲಿಯನ್ನು ನೈಸರ್ಗಿಕವಾಗಿ ನಡೆಸಿದರೆ ಅದು ಎಲ್ಲರಿಗೂ ಒಳ್ಳೆಯದು ಎಂಬ ಪಾಠ ಎಲ್ಲರೂ ಈ ಪುಷ್ಪ ಪ್ರದರ್ಶನದಿಂದ ಅರಿತು ಅನುಸರಿಸಬೇಕು. ಕಬ್ಬನ್ ಉದ್ಯಾನವನದ ಸುಂದರ ಪ್ರಕೃತಿಯಲ್ಲಿ ಆಯೋಜಿಸಲಾಗಿರುವ ಪುಷ್ಪ ಪ್ರದರ್ಶನಕ್ಕೆ ಎಲ್ಲರೂ ಆಗಮಿಸಿ ವೀಕ್ಷಿಸುವ ಮೂಲಕ ಉದ್ಯಾನವನದ ಸೌಂದರ್ಯವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular