HomeLatest NewsGOOD NEWS : ರಾಜ್ಯದಲ್ಲಿ ಶೀಘ್ರವೇ 18,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ...

GOOD NEWS : ರಾಜ್ಯದಲ್ಲಿ ಶೀಘ್ರವೇ 18,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ 18,000 ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳುತ್ತೇವೆ, ಸರ್ಕಾರಿ ಶಾಲೆಯಲ್ಲಿ 12 ಸಾವಿರ ಹಾಗೂ ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದರು.

ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಶಿಕ್ಷಕರು ಇರುವುದು ನಮ್ಮ ಸರ್ಕಾರಿ ಶಾಲೆಗಳಲ್ಲಿ ಅವರನ್ನು ಉತ್ತಮವಾಗಿ ಬಳಸಿಕೊಂಡರೆ ನಮ್ಮ ಫಲಿತಾಂಶ ಸುಧಾರಣೆ ಖಂಡಿತ ಸಾಧ್ಯವಾಗುತ್ತದೆ. ಜೊತೆಗೆ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ 625ಕ್ಕೆ 625 ಪೂರ್ಣಾಂಕಗಳನ್ನು ಪಡೆದಿದ್ದಾರೆ ಈ ಸಾಧನೆ ನಿಜಕ್ಕೂ ಶ್ಲಾಘನೀಯ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶವನ್ನು ಹೊಂದಿದ್ದು,ಅದರಂತೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಒಂದೇ ಒಂದು ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ. ಒತ್ತಾಯ ಪೂರ್ವಕವಾಗಿ ಶಾಲೆಗಳನ್ನು ವಿಲೀನಗೊಳಿಸುವ ಕಾರ್ಯ ನನ್ನ ಗಮನಕ್ಕೆ ಬಂದ್ದಿದ್ದು ಅಧಿಕಾರಿಗಳು ಈ ನಿರ್ಧಾರ ಕೈ ಬಿಡುವಂತೆ ಸಭೆಯಲ್ಲಿ ಸೂಚಿಸಿದೆನು ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular