HomeLatest Newsಶಿಕ್ಷಕರಿಗೆ ಗುಡ್ ನ್ಯೂಸ್: ಫಲಿತಾಂಶ, ದಾಖಲಾತಿ ಹೆಚ್ಚಿಸಿದವರಿಗೆ ಪ್ರೋತ್ಸಾಹ ಧನ ನೀಡಲು ಸರ್ಕಾರ ನಿರ್ಧಾರ

ಶಿಕ್ಷಕರಿಗೆ ಗುಡ್ ನ್ಯೂಸ್: ಫಲಿತಾಂಶ, ದಾಖಲಾತಿ ಹೆಚ್ಚಿಸಿದವರಿಗೆ ಪ್ರೋತ್ಸಾಹ ಧನ ನೀಡಲು ಸರ್ಕಾರ ನಿರ್ಧಾರ

ಶಿವಮೊಗ್ಗ: ಎಸ್ಎಸ್ಎಲ್ಸಿಯಲ್ಲಿ ಅತ್ಯುತ್ತಮ ಫಲಿತಾಂಶ ತರುವ ಮತ್ತು ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾದ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಪ್ರೋತ್ಸಾಹ ಧನ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರು ವಿಭಾಗದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಜಿಲ್ಲೆಗಳ ಪ್ರೌಢಶಾಲಾ ಶಿಕ್ಷಕರಿಗೆ ಶಿವಮೊಗ್ಗದಲ್ಲಿ ಆಯೋಜಿಸಿದ್ದ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಫಲಿತಾಂಶ ಕುಸಿತವಾದ ಶಾಲೆಗಳಿಗೆ ಶಿಕ್ಷೆ ನೀಡುವ ವ್ಯವಸ್ಥೆಯಿದೆ. ಫಲಿತಾಂಶ ಹೆಚ್ಚಳಕ್ಕೆ ಕಾರಣರಾದವರನ್ನು ಗುರುತಿಸುವ ವ್ಯವಸ್ಥೆ ಜಾರಿಗೆ ತರುತ್ತಿದ್ದು, ಪ್ರೋತ್ಸಾಹ ಧನ ವಿತರಣೆಗೆ ನಿಯಮಾವಳಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫಲಿತಾಂಶ ಸುಧಾರಣೆಯ ಕ್ರಮವಾಗಿ ಎಲ್ಲಾ ಶಾಲೆಗಳಲ್ಲಿ ಕಾಲಕಾಲಕ್ಕೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ನಡೆಸಿ ಸಮಿತಿ ಸದಸ್ಯರ ಸಲಹೆ, ಸಹಕಾರ ಪಡೆದುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದಾರೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದೊರಕಿಸಿಕೊಡುವ ನಿಟ್ಟಿನಲ್ಲಿ ಶಿಕ್ಷಕರು ಕೈಜೋಡಿಸಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular