HomeLatest NewsBIG NEWS: ನಾಳೆಯಿಂದ ಸಂಸತ್ ಅಧಿವೇಶನ: ಇಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

BIG NEWS: ನಾಳೆಯಿಂದ ಸಂಸತ್ ಅಧಿವೇಶನ: ಇಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ಸರ್ವ ಪಕ್ಷ ಸಭೆ ಕರೆದಿದೆ.

ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ ಭವನದಲ್ಲಿ ಸರ್ವ ಪಕ್ಷ ಸಭೆ ನಡೆಯಲಿದೆ. ಸಂಸತ್ ಅಧಿವೇಶನ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳ ಸದಸ್ಯರಿಗೆ ಕೇಂದ್ರ ಸರ್ಕಾರ ಮನವಿ ಮಾಡಲಿದೆ. ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ವಿಪಕ್ಷಗಳ ನಾಯಕರಿಗೆ ಕೇಂದ್ರ ಸರ್ಕಾರ ಭರವಸೆ ನೀಡಲಿದೆ, ನಾಳೆಯಿಂದ ಡಿಸೆಂಬರ್ 19 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular