HomeLatest NewsKSCA ಚುನಾವಣೆಗೆ ಸ್ಪರ್ಧಿಸಲು ಪತ್ರಿಕೋದ್ಯಮಿ ಶಾಂತಕುಮಾರ್ ಗೆ ಅವಕಾಶ: ಹೈಕೋರ್ಟ್ ಆದೇಶ

KSCA ಚುನಾವಣೆಗೆ ಸ್ಪರ್ಧಿಸಲು ಪತ್ರಿಕೋದ್ಯಮಿ ಶಾಂತಕುಮಾರ್ ಗೆ ಅವಕಾಶ: ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA) ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಪತ್ರಿಕೋದ್ಯಮಿ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಅಂಗೀಕರಿಸುವಂತೆ ಚುನಾವಣಾಧಿಕಾರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ತಮ್ಮ ನಾಮಪತ್ರ ತಿರಸ್ಕರಿಸಿದ್ದ ಚುನಾವಣೆ ಅಧಿಕಾರಿಯ ಕ್ರಮ ಪ್ರಶ್ನಿಸಿ ಶಾಂತಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆಲಿಸಿ ಕಾಯ್ದಿರಿಸಿದ್ಧ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಶನಿವಾರ ಪ್ರಕಟಿಸಿದೆ.

ನಿಗದಿತ ವೇಳಾಪಟ್ಟಿಯಂತೆ ಡಿಸೆಂಬರ್ 7ರಂದು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಅಡಿಯವರ ನೇತೃತ್ವದಲ್ಲಿ ಚುನಾವಣೆ ನಡೆಸಬೇಕು. ಅದೇ ದಿನ ಫಲಿತಾಂಶ ಪ್ರಕಟಿಸಲು ಸೂಚಿಸಿ ಈ ಹಿಂದೆ ನೀಡಿರುವ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಂತಕುಮಾರ್ ನಾಮಪತ್ರ ತಿರಸ್ಕರಿಸಿ ಚುನಾವಣಾಧಿಕಾರಿ ನೀಡಿದ್ದ ಹಿಂಬರಹ ರದ್ದುಪಡಿಸಲಾಗಿದೆ. ಅರ್ಜಿದಾರ ಶಾಂತಕುಮಾರ್ ಪ್ರತಿನಿಧಿಸುವ ಸ್ಪೋರ್ಟ್ಸ್ ಕ್ಲಬ್ 200 ರೂ. ಚಂದಾದಾರಿಕೆ ಬಾಕಿ ಉಳಿಸಿಕೊಂಡ ಕಾರಣ ನೀಡಿ ಕೆ.ಎಸ್.ಸಿ.ಎ. ಅಧ್ಯಕ್ಷ ಸ್ಥಾನಕ್ಕೆ ಶಾಂತಕುಮಾರ್ ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular