BIG NEWS: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ: ವಿಪಕ್ಷಗಳಿಂದ ಭಾರಿ ಗದ್ದಲ ಸಾಧ್ಯತೆ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಡಿಸೆಂಬರ್ 19 ರವರೆಗೆ ನಡೆಯಲಿದೆ. ಹಲವು ಮಸೂದೆಗಳ ಮಂಡನೆಗೆ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ವಿಪಕ್ಷಗಳು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಮತಕಳವು ವಿಚಾರ ಪ್ರಸ್ತಾಪಿಸಿ ಗದ್ದಲ ನಡೆಸುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರವು ನಾಗರಿಕ ಅಣು ಕ್ಷೇತ್ರದಲ್ಲಿ ಖಾಸಗಿಯವರಿಗೂ ಅವಕಾಶ ನೀಡುವ ವಿಧೇಯಕ ಸೇರಿ 10 ವಿವಿಧ ಮಸೂದೆಗಳ ಅಂಗೀಕಾರಕ್ಕೆ ಸಜ್ಜಾಗಿದೆ. 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮತ್ತು ಮತಗಳ ವಿಚಾರ ಮುಂದಿಟ್ಟುಕೊಂಡು ವಿಪಕ್ಷಗಳು ತೀವ್ರ ಗದ್ದಲ ನಡೆಸುವ ಸಾಧ್ಯತೆ ಇದೆ.

ಕಾಂಗ್ರೆಸ್ ಹಾಗೂ ಇತರೆ ಪ್ರತಿಪಕ್ಷಗಳು, ಮತ ಕಳವು ಮತ್ತು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿಚಾರ ಮುಂದಿಟ್ಟು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಎಲ್ಲ ಪಕ್ಷಗಳ ಸಂಸದೀಯ ನಾಯಕರ ಜೊತೆಗೆ ಸರ್ವಪಕ್ಷ ಸಭೆ ನಡೆಸಿದ್ದು, ಸಂಸತ್ ಕಲಾಭವನ್ನು ಸುಗಮವಾಗಿ ನಡೆಸಲು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read