GOOD NEWS: ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೂ ‘ಪುನೀತ್ ಹೃದಯ ಜ್ಯೋತಿ’ ವಿಸ್ತರಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಅಗತ್ಯವಾದ ಎಲ್ಲ‌ ಕ್ರಮ ವಹಿಸಬೇಕು. ಜೊತೆಗೆ ಲಿಂಗಾನುಪಾತ ಸಮತೋಲನವಾಗಿರುವಂತೆ ನೋಡಿಕೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿಹೆಚ್ಓ ಕಚೇರಿಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಯಿ ಮತ್ತು ಶಿಶು‌ ಮರಣ ಪ್ರಮಾಣ ತಗ್ಗಿಸಲು ಹೈರಿಸ್ಕ್ ಗರ್ಭಿಣಿಯರ ಕುರಿತು ಕಡ್ಡಾಯವಾಗಿ ಶೇ.100 ಟ್ರಾಕ್ ಆಗಬೇಕು. ಎಎನ್ಸಿ ‌ನೋಂದಣಿ ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಆಗುವಂತೆ ನೋಡಿಕೊಳ್ಳಬೇಕು. ತಾಯಿ ಮರಣ ಪ್ರಮಾಣ 80 ಇದ್ದು ಹೊರ ಜಿಲ್ಲೆಗಳ ಗಂಭೀರ ಪ್ರಕರಣಗಳಿಂದಾಗಿ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಶಿಶು ಮರಣ 15.1 ಇದ್ದು  ಕಳೆದ ಸಾಲಿಗಿಂತ ಕಡಿಮೆ ಆಗಿದೆ. ತಾಯಿ ಮತ್ತು ಶಿಶು ಮರಣ ಪ್ರಮಾಣ ರಾಜ್ಯ ಸರಾಸರಿಗಿಂತ ಹೆಚ್ಚಿದ್ದು ಇದನ್ನು ಕಡಿತಗೊಳಿಸಲು ಸೂಕ್ತ ಕ್ರಮ‌ಕೈಗೊಳ್ಳಬೇಕೆಂದು ಸೂಚಿಸಿದರು.

ಲಿಂಗಾನುಪಾತ ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಸೊರಬ, ಶಿವಮೊಗ್ಗ, ಭದ್ರಾವತಿ ಕಡಿಮೆ ಇದ್ದು ಯಾಕೆಂದು ತಿಳಿದು ಕ್ರಮ‌ ವಹಿಸಬೇಕು. ಲಿಂಗ ಪತ್ತೆ ಹಚ್ಚುವ ಕಾರ್ಯವೆಲ್ಲಾದರೂ ನಡೆಯುತ್ತಿದೆಯೋ ಎಂದು ಪತ್ತೆ ಹಚ್ಚಬೇಕು. ಎಎನ್ಸಿ ನೋಂದಣಿ ಕಡ್ಡಾಯವಾಗಿ ಮಾಡಿಸಿ. ವಿಳಂಬ ನೋಂದಣಿಯಲ್ಲಿ ಲಿಂಗಾನುಪಾತ ಪತ್ತೆ ಹಚ್ಚಿ ವರದಿ ನೀಡುವಂತೆ ತಿಳಿಸಿದರು.

ಸಿಹೆಚ್ಸಿ ಗಳಲ್ಲಿ ಹೆರಿಗೆ ಪ್ರಮಾಣ ಕಡಿಮೆ ಇದೆ. ಹೆರಿಗೆ ಅತಿ ಕಡಿಮೆ ಇರುವ ಸಿಹೆಚ್ಸಿಯಿಂದ ಪ್ರಸೂತಿ‌ ಮತ್ತು ಅರವಳಿಕೆ ತಜ್ಞ ವೈದ್ಯರನ್ನು‌ ತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸಿ 24/7 ಕೆಲಸ ಮಾಡುವಂತೆ ಕ್ರಮ‌ವಹಿಸಬಹುದು ಎಂದ ಅವರು ತಾಲ್ಲೂಕು ಆಸ್ಪತ್ರೆಗಳನ್ನು ಹೆಚ್ಚಿನ ಮಟ್ಟದಲ್ಲಿ ಸುಧಾರಣೆ ಮಾಡಬೇಕು. ಆಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೂ ಹೊರೆ ಕಡಿಮೆ ಆಗುತ್ತದೆ ಎಂದರು.

ನಮ್ಮ ಕ್ಲಿನಿಕ್ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಎಎಂಪಿಕೆ(ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ) ಕಾರ್ಯಕ್ರಮದಡಿ 5 ರಿಂದ  19 ರ್ಷದೊಳಗಿನ  ಶಾಲಾ- ಕಾಲೇಜಿನ 114196 ಮಕ್ಕಳನ್ನು ತಪಾಸಣೆಗೆ ಒಳಡಿಸಿದ್ದು, 6.5 % ತೀವ್ರವಲ್ಲದ(ಮೈಲ್ಡ್) 5.7% ಮಧ್ಯಮ(ಮಾಡರೇಟ್) ಮತ್ತು 0.04 ತೀವ್ರ(ಸಿವಿಯರ್) ಅನಿಮಿಯಾ ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದು, ಚಿಕಿತ್ಸೆ ಮುಗಿದ ನಂತರ ಮುಂದಿನ ತಿಂಗಳು‌ ವರದಿ ನೀಡಿ  ಎಂದರು .

 ಗೃಹ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲೆಯಲ್ಲಿಆಗಸ್ಟ್ ಯಿಂದ ಸೆಪ್ಟೆಂಬರ್ ವರೆಗೆ ಸಕ್ಕರೆ ಖಾಯಿಲೆ 178, ಕಿಡ್ನಿ ಖಾಯಿಲೆ 147, ಸಿಒಪಿಡಿ 36, ಅನೀಮಿಯಾ 97, ಸ್ತನ ಕ್ಯಾನ್ಸರ್ 16, ಗರ್ಭ ಕ್ಯಾನ್ಸರ್ 4 ಸೇರಿದಂತೆ ವಿವಿಧ ಖಾಯಿಲೆಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ಮತ್ತು ಸಲಹೆ ನೀಡಲಾಗುತ್ತಿದೆ. 14 ಆರೋಗ್ಯ ಸಮಸ್ಯೆಗಳನ್ನು ತಪಾಸಣೆಗೊಳಪಡಿಸಿ ರೋಗಿಗಳಿಗೆ ದೀರ್ಘಕಾಲದ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಗೃಹ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದು, ಬೇರೆ ಯಾವ ರಾಜ್ಯದಲ್ಲೂ ಇಂತಹ ಕಾರ್ಯ ಇಲ್ಲ. ಮನೆ ಮನೆಗೆ ತೆರಳಿ ಈ ಕಾರ್ಯಕ್ರಮವನ್ನು ಪರಿಣಾಮಕಾರಿಗೊಳಿಸಬೇಕು. ಸಕ್ಕರೆ ಖಾಯಿಲೆ ಮತ್ತು ಹೈಪರ್ ಟೆನ್ಶನ್ ಸಮಸ್ಯೆಗಳನ್ನು ಸಮರ್ಪಕವಾಗಿ ಸ್ಕ್ರೀನಿಂಗ್ ಮಾಡಬೇಕೆಂದು ಸೂಚನೆ ನೀಡಿದರು.

ಡಾ. ಪುನೀತ್ ಹೃದಯ ಜ್ಯೋತಿ ಕಾರ್ಯಕ್ರಮದಡಿ ಎಐ ಮೂಲಕ ಹೃದಯ ಖಾಯಿಲೆ ಪತ್ತೆ ಮಾಡಿ, ಗಂಭೀರವಾಗಿದ್ದರೆ ವೈದ್ಯರಿಗೆ ರೆಫರ್ ಮಾಡಿ ಚಿಕಿತ್ಸೆ ನೀಡಲಾಗುವುದು. ಈ ಕಾರ್ಯಕ್ರಮದಡಿ ಹಲವಾರು ಜೀವ ಉಳಿಸಲಾಗಿದ್ದು ಈ ಬಾರಿ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೂ ಈ ಕಾರ್ಯಕ್ರಮ ವಿಸ್ತರಿಸಲಾಗುವುದು ಎಂದರು.

ಸಭೆಯಲ್ಲಿ‌ಎನ್ ಸಿಡಿ ಉಪನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ.ರಘುನಂದನ್, ಡಿಹೆಚ್ಒ ಡಾ.ನಟರಾಜ್, ಎನ್ವಿಬಿಡಿಸಿಪಿ ಅಧಿಕಾರಿ ಡಾ.ಗುಡುದಪ್ಪ ಕಸಬಿ,  ಡಿಎಸ್ಓ ಡಾ.ನಾಗರಾಜ ನಾಯ್ಕ್ , ಆರ್ಸಿಹೆಚ್ಒ ಡಾ.ಮಲ್ಲಪ್ಪ, ಡಿಎಲ್ ಒ ಡಾ.ಕಿರಣ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಜರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read