HomeLatest NewsBIG NEWS : ರಾಜ್ಯದ ಎಲ್ಲಾ 'ಶಿಕ್ಷಣ ಸಂಸ್ಥೆ'ಗಳಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಈ...

BIG NEWS : ರಾಜ್ಯದ ಎಲ್ಲಾ ‘ಶಿಕ್ಷಣ ಸಂಸ್ಥೆ’ಗಳಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಈ ಕ್ರಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ: 5/2025ರ ದಿನಾಂಕ: 07.11.2025ರ ತೀರ್ಪಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ನಿರ್ದೇಶನ ನೀಡಿರುತ್ತದೆ. ಈ ಸಂಬಂಧ ಉಲ್ಲೇಖಿತ (2) ರ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಟೆಗಟ್ಟುವ ನಿಟ್ಟಿನಲ್ಲಿ ಅನುಸರಿಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ.

ಉಲ್ಲೇಖಿತ ಆದೇಶಗಳಂತೆ, ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. ಎಲ್ಲಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ನಾಯಿಗಳ ಸಂಖ್ಯೆಯನ್ನು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣ ನೀಡುವುದು.
  2. ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುತಿಸಿದ ನಾಯಿಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ನಾಯಿ ಆಶ್ರಯ ತಾಣಗಳಿಗೆ ಸಾಗಿಸಲು ಸಹಕಾರ ನೀಡುವುದು.
  3. ಒಮ್ಮೆ ನಾಯಿಗಳನ್ನು ಶಿಕ್ಷಣ ಸಂಸ್ಥೆಯ ಆವರಣದಿಂದ ಸ್ಥಳಾಂತರಿಸಿದ ನಂತರ ಪುನ: ಬೀದಿನಾಯಿಗಳು ಶಾಲಾ ಆವರಣದೊಳಗೆ ಪ್ರವೇಶಿಸದಂತೆ ತಡೆಯಲು ಸಂಸ್ಥೆಯ ಆವರಣಕ್ಕೆ ಕಾಂಪೌಂಡ್ /ಬೇಲಿಯನ್ನು ನಿರ್ಮಿಸುವುದು.
  4. ಮೇಲ್ಕಂಡ ಎಲ್ಲಾ ಚಟುವಟಿಕೆಗಳ ಮೇಲುಸ್ತುವಾರಿ ಮಾಡಲು ಹಾಗೂ ಸ್ಥಳಿಯ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಲು ಆಯಾ ಶಾಲೆಯ ಮುಖ್ಯಶಿಕ್ಷಕರು ಪ್ರಾಂಶುಪಾಲರು/ಹಿರಿಯ ಸಹಶಿಕ್ಷಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸುವುದು.
    ಆಯಾ ತಾಲ್ಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಉಪನಿರ್ದೇಶಕರು(ಆಡಳಿತ ಮತ್ತು ಪದವಿ ಪೂರ್ವ)) ಇವರು ತಮ್ಮ ವ್ಯಾಪ್ತಿಯ ಶಾಲಾ/ಕಾಲೇಜುಗಳ ಮುಖ್ಯಸ್ಥರು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಶಾಲಾ-ಕಾಲೇಜುಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಸೂಕ್ತ ಕ್ರಮವಹಿಸಿರುವುದನ್ನು ಖಾತ್ರಿಪಡಿಸಿಕೊಳ್ಳುವುದು. ತಾಲ್ಲೂಕು ಮತ್ತು ಜಿಲ್ಲಾ ವ್ಯಾಪ್ತಿಯ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಶಾಲಾ-ಕಾಲೇಜುಗಳ ಮುಖ್ಯಸ್ಥರು ಸಲ್ಲಿಸಿರುವ ಮಾಹಿತಿಯಂತೆ ಕ್ರಮವಾಗುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಶಾಲಾ-ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುತ್ತಿರುವುದನ್ನು ಪ್ರತಿ 15 ದಿನಗಳಿಗೊಮ್ಮೆ ಶಾಲಾ-ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಿ ಅನುಪಾಲನೆ ಮಾಡಲು ಸೂಚಿಸಿದೆ.
    ಆಯುಕ್ತರು, ಅಪರ ಆಯುಕ್ತರು (ಧಾರವಾಡ ಮತ್ತು ಕಲಬುರಗಿ), ಶಾಲಾ ಶಿಕ್ಷಣ ಇಲಾಖೆ, ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ನಿರ್ದೇಶಕರು (ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ) ಇವರು ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ, ಖಾತ್ರಿಪಡಿಸಿಕೊಳ್ಳಲು ಸೂಚಿಸಿದೆ.
  5. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿನಾಯಿಗಳ ಉಪಟಳವನ್ನು ತಡೆಗಟ್ಟಲು ಮೇಲೆ ವಿವರಿಸಿದಂತೆ ಮಕ್ಕಳ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಂಡು ಶಾಲಾ/ಕಾಲೇಜು ಆವರಣದಲ್ಲಿ ಬೀದಿನಾಯಿಗಳಿಂದ ಯಾವುದೇ ಅವಘಡ ಸಂಭವಿಸದಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಅನುಷ್ಠಾನಗೊಳಿಸಲು ಕಟ್ಟುನಿಟ್ಟಾಗಿ ಕ್ರಮವಹಿಸಲು ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular