ಶಿವಮೊಗ್ಗ: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 61 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
2023 ರಲ್ಲಿ ಬಾಲಕಿಯ ಮೇಲೆ ಯುವಕ ದೌರ್ಜನ್ಯ ಎಸಗಿದ್ದ. ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಭದ್ರಾವತಿ ನಗರದ ಸಿಪಿಐ ಶ್ರೀಧರ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆಯ ವೇಳೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.
