BREAKING: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿಕ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್: ಸಿಎಂ-ಡಿಸಿಎಂ ಮತ್ತೊಂದು ಉಪಹಾರ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಪೈಪೋಟಿ ನಡುವೆಯೇ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು.

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ-ಡಿಸೆಂ ಒಗ್ಗಟ್ಟಿನ ಸಂದೇಶ ರವಾನಿಸಿ ಏನೇ ಇದ್ದರೂ ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದರು. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಸಿದರಾಮಯ್ಯ ಅವರನ್ನು ತಮ್ಮ ಮನೆಗೆ ಆಹ್ವಾನಿಸಿದ್ದು, ಉಪಹಾರ ಸಭೆ ನಡೆಸಲು ಮುಂದಾಗಿದ್ದಾನೆ.

ನಾಳೆ ಮಂಗಳವಾರ ಬೆಳಿಗ್ಗೆ 9:30ಕ್ಕೆ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೊಂದು ಸುತ್ತಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ. ಇಬ್ಬರ ಉಪಹಾರ ಸಭೆ ತೀವ್ರ ಕುತೂಹಲ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read