ಶ್ರೀನಗರ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಜಮ್ಮು-ಕಾಶೀರದ ವಿವಿಧೆಡೆ ದಾಳಿ ನಡೆಸಿದ್ದಾರೆ.
ಕಾಶ್ಮೀರ ಕಣಿವೆಯ ಹಲವೆಡೆ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ. ಕಾಶ್ಮೀರದ ಶೋಪಿಯಾನ್, ಪುಲ್ವಾಮಾ, ಕುಲ್ಗಾಮ್ ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ.
ಪುಲ್ವಾಮದ ಕೊಯಿಲ್, ಚಂಡ್ ಗಮ್, ಮಲಂಗ್ ಪೋರಾ ಮತ್ತು ಸಂಬೂರಾ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ. ಭಯೋತ್ಪಾದಕ ಜಾಲ ಹಾಗೂ ಅದಕ್ಕೆ ಬೆಂಬಲ ನೀಡುವ ವ್ಯವಸ್ಥೆಗಳನ್ನು ಭೇದಿಸುವ ಪ್ರಯತ್ನಗಳ ಭಾಗವಾಗಿ ಜೆಇಇ ಸದಸ್ಯರು ಹಾಗೂ ಅವರ ಸಹಚರರಿಗೆ ಸೇರಿದ ಮನೆಗಳು, ಇತರ ತಾಣಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ.
