ತಿರುವನಂತಪುರಂ: ಮಸಾಲಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ದಾಖಲಾದ ಪ್ರಕರಣದಲ್ಲಿ ಇಡಿ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಮಾಜಿ ಹಣಕಾಸು ಸಚಿವ ಹಾಗೂ ಸಿಪಿಎಂ ನಾಯಕ ಥಾಮಸ್ ಐಸಾಕ್, ಕಿಫ್ ಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಅಬ್ರಾಹಂ ಅವರಿಗೆ ನೋಟಿಸ್ ನೀಡಿದೆ.
2019ರಲ್ಲಿ ವಿದೇಶಿ ವಿನಿಮಯ ನಿರ್ವಹನಾ ಕಾಯ್ದೆ (ಫೆಮಾ ಕಾಯ್ದೆ) ಉಲ್ಲಂಘನೆ ಮಾಡಿ ಮಾಸಾಲಾ ಬಾಂಡ್ ಗಳ ಮೂಲಕ ಕಿಫ್ ಬಿ 2,150 ಕೋಟಿ ಸಂಗ್ರಹಿಸಿತ್ತು ಎಂದು ಆರೋಪಿಸಲಾಗಿದೆ.
