ಕೋಲಾರ: ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನಿಳ್ಳಕೋಟೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಆಂಧ್ರ ಮೂಲದ ೫೮ ವರ್ಷದ ಅನಿತಾ ಮೃತ ಮಹಿಳೆ. ಆಂಧ್ರದ ಬಂಧ್ವೇಲ್ ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬದ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮದನಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
