Breakfast Meeting : DCM ಡಿ.ಕೆ ಶಿವಕುಮಾರ್ ನಿವಾಸದಲ್ಲಿ ನಾಟಿ ಕೋಳಿ, ಇಡ್ಲಿ ಸವಿದ CM ಸಿದ್ದರಾಮಯ್ಯ |WATCH VIDEO

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು ಆಗಮಿಸಿದ್ದು, ನಾಟಿ ಕೋಳಿ ಹಾಗೂ ಇಡ್ಲಿ ಸವಿದಿದ್ದಾರೆ.

ಶನಿವಾರವಷ್ಟೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ಇದೀಗ ಡಿಸಿಎಂ ಆಹ್ವಾನದ ಮೇರೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಒಟ್ಟಿಗೆ ಕುಳಿತು ಉಪಹಾರ ಸೇವಿಸಿದ್ದಾರೆ. ಮನೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಡಿಕೆಶಿ ಇಡ್ಲಿ ಹಾಗೂ ನಾಟಿ ಕೋಳಿ ಸಾಂಬಾರ್ ಮಾಡಿಸಿದ್ದರು.ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್, ಹೂಗುಚ್ಛ ನೀಡಿ, ಶಾಲು ಹೊದಿಸಿ ಬರ ಮಾಡಿಕೊಂಡರು.

ಡಿನ್ನರ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮೊನ್ನೆ ನಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಬಂದಾಗ ನನ್ನನ್ನೂ ಮಂಗಳವಾರ ಬ್ರೇಕ್ ಫಾಸ್ಟ್ ಗೆ ಬನ್ನಿ ಎಂದು ಆಹ್ವಾನಿಸಿದ್ದರು. ಹಾಗಾಗಿ ಬಂದಿದ್ದೆ. ಇಬ್ಬರೂ ಸೇರಿ ಬ್ರೇಕ್ ಫಾಸ್ಟ್ ಮಾಡಿದ್ದು, ಪಕ್ಷದ ವಿಚಾರ, ಅಧಿವೇಶನದ ವಿಚಾರ ಎಲ್ಲವನ್ನೂ ಚರ್ಚೆ ನಡೆಸಿದ್ದೇವೆ ಎಂದರು.

ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಿದ್ದೇವೆ. ರಾಜ್ಯದ ಅಭಿವೃದ್ಧಿ ಕೆಲಸ, ರೈತರ ಸಮಸ್ಯೆ, ಬೆಳೆ ಪರಿಹಾರ, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ರೈತರ ಬೇಡಿಕೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ. ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದರೂ ಎದುರಿಸುತ್ತೇವೆ. ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇದೆ ಎಂದು ಹೇಳಿದರು.ಇನ್ನು ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಏನು ಹೇಳುತ್ತಾರೆ ಅದರಂತೆ ನಡೆಯುತ್ತೇವೆ. ಅವರ ನಿರ್ಧಾರವೇ ಅಂತಿಮ. ನಾಳೆ ಮಂಗಳೂರಿನಲ್ಲಿ ಕಾರ್ಯಕ್ರಮವಿದೆ. ಅಲ್ಲಿ ಕೆ.ಸಿ.ವೇಣುಗೋಪಾಲ್ ಕೂಡ ಬರುತ್ತಾರೆ. ಸಮಯ ಸಿಕ್ಕರೆ ನಾವು ಹೈಕಮಾಂಡ್ ಭೇಟಿ ಮಾಡುತ್ತೇವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read