HomeLatest Newsಗ್ರಾಮೀಣ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಸ್ವತ್ತು ಸಹಾಯವಾಣಿ ಸ್ಥಾಪನೆ

ಗ್ರಾಮೀಣ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಸ್ವತ್ತು ಸಹಾಯವಾಣಿ ಸ್ಥಾಪನೆ

ಇ – ಸ್ವತ್ತು ಪಡೆಯಲು ಇರುವ ಎಲ್ಲಾ ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ – ಸ್ವತ್ತು ಸಹಾಯವಾಣಿ 9483476000 ಸ್ಥಾಪಿಸಲಾಗಿದೆ.

ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್‌ ರೂಪದ ಇ – ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗ್ರಾಮೀಣ ಆಸ್ತಿಗಳಿಗೆ ಇ-ಖಾತಾ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆರಿಗೆ ವ್ಯಾಪ್ತಿಗೆ ಒಳಪಡದ ಕೃಷಿಯೇತರ ಆಸ್ತಿಗಳಿಗೆ ಇ-ಖಾತೆ ನೀಡಲು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತಿ ರಾಜ್ ಅಧಿನಿಯಮ 1993 ಪ್ರಕರಣ 199ಕ್ಕೆ ತಿದ್ದುಪಡಿ ತರುವ ಮೂಲಕ, ಕರ್ನಾಟಕ ಗ್ರಾಮ ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು 2025 ಅನ್ನು ರೂಪಿಸಲಾಗಿದೆ. ಅದರ ಅನ್ವಯ, ಗ್ರಾಮೀಣ ಜನರು ಇ-ಸ್ವತ್ತು ಪೋರ್ಟಲ್ ಮೂಲಕ ಮನೆಯಲ್ಲಿಯೇ ಕುಳಿತು ತಮ್ಮ ಆಸ್ತಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ಹಾಗೂ ಇ-ಖಾತೆಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಲಾಗಿದೆ. ಇದರಿಂದ ಆಸ್ತಿ ತೆರಿಗೆ ಲೆಕ್ಕಾಚಾರ ಸರಳಗೊಳ್ಳಲಿದ್ದು, ಪಾರದರ್ಶಕತೆ ಹೆಚ್ಚಲಿದೆ.

ಅರ್ಜಿದಾರರು ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ಇ-ಖಾತೆ ಪಡೆಯಬಹುದಾಗಿದ್ದು, ನಿಗದಿತ ಅವಧಿಯಲ್ಲಿ ಅಧಿಕಾರಿಗಳಿಂದ ಅನುಮೋದನೆ ದೊರಕದೆ ಇದ್ದರೆ ಸ್ವಯಂಚಾಲಿತವಾಗಿ ಅನುಮೋದನೆಯಾಗಲಿದೆ. ಸ್ಥಳೀಯ ಯೋಜನಾ ಅಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ಪಡೆಯದೆ ನಿರ್ಮಾಣವಾಗಿದ್ದ ಬಡಾವಣೆಗಳಲ್ಲಿನ ನಿವೇಶನಗಳಿಗೆ 11ಬಿ ಖಾತೆ ಕೂಡ ನೀಡಲು ಅವಕಾಶ ಕಲ್ಪಿಸಲಾಗಿದೆ.

ಇ ಸ್ವತ್ತು ಪಡೆಯಲು ಎದುರಾಗುವ ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿ ಸ್ಥಾಪಿಸಲಾಗಿದ್ದು, ಜನರು 94834 76000 ಸಂಖ್ಯೆಗೆ ಕರೆ ಮಾಡಿ ಗೊಂದಲಗಳನ್ನು ನಿವಾರಿಸಿಕೊಳ್ಳಬಹುದಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಹಾಗೂ ತೆರಿಗೆ ವ್ಯವಸ್ಥೆಯನ್ನು ಸುಧಾರಿಸುವ ಈ ಯೋಜನೆಯು ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular