ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ತಿರಸ್ಕರಿಸಿ ತನಿಖೆ ಮುಂದುವರಿಕೆಗೆ ನ್ಯಾಯಾಲಯ ಆದೇಶ ನೀಡಿದೆ.
42ನೇ ಎಸಿಜೆಎಂ ನ್ಯಾಯಾಲಯ ಆದೇಶ ನೀಡಿದ್ದು, ಡಿಸೆಂಬರ್ 29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಎಸ್ಐಟಿ ಪೊಲೀಸರಿಗೆ ಸೂಚನೆ ನೀಡಿದೆ
ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್ ತಿರಸ್ಕರಿಸಿ ತನಿಖೆ ಮುಂದುವರಿಕೆಗೆ ನ್ಯಾಯಾಲಯ ಆದೇಶ ನೀಡಿದೆ. ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಗುರಿಯಾಗಿರುವ ಸೂರಜ್ ರೇವಣ್ಣ ವಿರುದ್ಧದ ಎಸ್ಐಆರ್ ಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2024ರ ಜೂನ್ 22ರಂದು ಸೂರಜ್ ರೇವಣ್ಣ ಬ್ರಿಗೇಡ್ ಖಜಾಂಚಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿತ್ತು.
