ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ಅವರು ಭಾರತಕ್ಕೆ ಆಗಮಿಸಲಿದ್ದು, ನಾಳೆ, ನಾಡಿದ್ದು ಎರಡು ದಿನ ಪ್ರವಾಸ ನಿಗದಿಯಾಗಿದೆ.
23ನೇ ಭಾರತ -ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಭೇಟಿಯ ವೇಳೆ ಉಭಯ ನಾಯಕರಿಂದ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಚರ್ಚೆಯ ವೇಳೆ ಉಭಯ ದೇಶಗಳ ಸಂಬಂಧ ಸುಧಾರಣೆಯ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಅದೇ ರೀತಿ ಎಸ್ -400, ಸುಖೊಯ್- 57 ಯುದ್ಧ ವಿಮಾನಗಳ ಖರೀದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪುಟಿನ್ ಅವರಿಗೆ ಔತಣಕೂಟ ಆಯೋಜನೆ ಮಾಡಲಾಗಿದೆ.
