HomeLatest NewsSHOCKING: ಮದುವೆಯಾದ ಮರುದಿನವೇ ಹೃದಯಾಘಾತದಿಂದ ಯುವಕ ಸಾವು

SHOCKING: ಮದುವೆಯಾದ ಮರುದಿನವೇ ಹೃದಯಾಘಾತದಿಂದ ಯುವಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ ಮದುವೆಯಾದ ಮರುದಿನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರಮೇಶ್(30) ಮೃತಪಟ್ಟವರು. ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತಿಯನ್ನು ರಮೇಶ್ ಮದುವೆಯಾಗಿದ್ದರು. ವಧುವಿನ ಮನೆಗೆ ನವ ದಂಪತಿ ತೆರಳಿದ್ದಾರೆ. ದೇವರ ಕೋಣೆಗೆ ಹೋಗಿ ಕೈಮುಗಿದು ಹೊರ ಬರುತ್ತಿದ್ದಂತೆ ರಮೇಶ್ ಹೃದಯಾಘಾತದಿಂದ ಕುಸಿತು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ. ಮಂಗಳವಾರ ಹೊಳೆಹೊನ್ನೂರು ಸಮೀಪದ ಹೊಸಕೊಪ್ಪದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular