ಮಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಸಿಎಂ ಹಾಗೂ ಡಿಸಿಎಂ 2 ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ನಂತರ ಕೈ ನಾಯಕರ ನಡೆ ಬಹಳ ಕುತೂಹಲ ಮೂಡಿಸಿದೆ.
ಮಂಗಳೂರಿಗೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆಗಮಿಸಿದ್ದು, ಈ ವೇಳೆ ಕೈ ಕಾರ್ಯಕರ್ತರು ಡಿ.ಕೆ… ಡಿಕೆ ಎಂದು ಕೂಗಿದ ಪ್ರಸಂಗ ನಡೆಯಿತು. ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಈ ಘಟನೆ ನಡೆದಿದೆ.
ಮಂಗಳೂರು ವಿವಿಯಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧಿನಾರಾಯಣ ಗುರು ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ವೇಣುಗೋಪಾಲ್ ಅವರನ್ನ ಕಾರ್ಯಕರ್ತರು ಸ್ವಾಗತಿಸಿದರು. ಮತ್ತು ಡಿಕೆ ಡಿಕೆ ಎಂದು ಘೋಷಣೆ ಕೂಗಿದರು. ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ನೀಡಿದ್ದು, ವೇಣುಗೋಪಾಲ್ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ.
#WATCH | Mangaluru, Karnataka | Slogans in support of DK Shivakumar raised at the airport on the arrival of AICC General Secretary KC Venugopal. pic.twitter.com/gEFnQ0lp19
— ANI (@ANI) December 3, 2025
ನನ್ನ ದೆಹಲಿ ಭೇಟಿಯ ವೇಳೆ ಹೈಕಮಾಂಡ್ನವರು ಭೇಟಿಗೆ ಅವಕಾಶ ನೀಡಿದರೆ ಅವರನ್ನು ಭೇಟಿ ಮಾಡಲಾಗುವುದು.
— Siddaramaiah (@siddaramaiah) December 2, 2025
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭೇಟಿಯಾಗುತ್ತೇನೆ.
ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆಯೂ ಚರ್ಚಿಸಿ ನಿರ್ಧರಿಸಿದ್ದೆವು, ಇಂದೂ ಕೂಡ… pic.twitter.com/AkeewaDdru
