ಬೆಂಗಳೂರು : ‘ಅತ್ಯಾಚಾರ ಕೇಸ್’ ನಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದ್ದು, ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಹೌದು. ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಕೆ ಎಸ್ ಮುದುಗಲ್ ಹಾಗೂ ಟಿ ವೆಂಕಟೇಶ ನಾಯಕ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ( Prajwal Revanna ) ದೋಷಿ ಎಂದು ‘ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್’ ತೀರ್ಪು ನೀಡಿತ್ತು. ಜೀವಾವಧಿ ಶಿಕ್ಷೆ ಜೊತೆಗೆ 5 ಲಕ್ಷ ರೂ.ದಂಡ ವಿಧಿಸಲಾಗಿತ್ತು. ಇದನ್ನ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಮೈಸೂರು ಜಿಲ್ಲೆಯ ಕೆ.ಆರ್ ನಗರದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಲಾಗಿತ್ತು.
