ಮಂಡ್ಯ : ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ್ದು, ತಳ್ಳಾಟ ನೂಕಾಟ ನಡೆದಿದೆ.
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದೆ. ಸಂಕೀರ್ತನಾ ಯಾತ್ರೆ ವೇಳೆ ಈ ಘಟನೆ ನಡೆದಿದೆ.
ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಮಾಲಾಧಾರಿಗಳನ್ನು ಪೊಲೀಸರು ತಡೆದಿದ್ದಾರೆ. ಸ್ಥಳದಲ್ಲಿ ತಳ್ಳಾಟ- ನೂಕಾಟ ನಡೆದಿದೆ. ಜಾಮೀಯಾ ಮಸೀದಿಯಲ್ಲಿರುವವನು ಹನುಮಂತ ಎಂದು ಕೆಲವರು ಘೋಷಣೆ ಕೂಗಿದ್ದಾರೆ.
ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದೆ. ಮೂಡಲ ಬಾಗಿಲು ಶ್ರೀ ಆಂಜನೇಯಸ್ವಾಮಿ ದೇಗುಲ ಮರು ಸ್ಥಾಪನೆ ಸಂಕಲ್ಪದೊಂದಿಗೆ, ನಿಮಿಷಾಂಬ ದೇಗುಲದಿಂದ ಜಾಮಿಯಾ ಮಸೀದಿ ಮುಂಭಾಗದ ರಂಗನಾಥಸ್ವಾಮಿ ದೇಗುಲದ ತನಕ ಯಾತ್ರೆ ನಡೆಯಲಿದೆ.
ಶ್ರೀರಂಗಪಟ್ಟಣದಲ್ಲಿ ಇರುವ ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೆ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಇತ್ತು. ಆ ದೇವಸ್ಥಾನವನ್ನು ಕೆಡವಿ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದ ಎನ್ನಲಾಗಿದೆ., ಮೈಸೂರು, ಕೊಡಗು, ಹಾಸನ, ರಾಮನಗರ ಸೇರಿ ವಿವಿಧ ಜಿಲ್ಲೆಗಳಿಂದ ಹನುಮ ಮಾಲಾಧಾರಿಗಳು ಬರುತ್ತಿದ್ದಾರೆ.
