ಬೆಂಗಳೂರು: ‘ಕಾಂತಾರ ಚಾಪ್ಟರ್ 1’ನಲ್ಲಿ ನಟ ರಿಷಬ್ ಶೆಟ್ಟಿ ಅವರ ನಟನೆಯನ್ನು ಅಪಹಾಸ್ಯ ಮಾಡಿ ವಿವಾದಕ್ಕೀಡಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗೋವಾ ಚಲನಚಿತ್ರೋತ್ಸವದ ವೇಳೆ ರಿಷಬ್ ಶೆಟ್ಟಿ ಅವರ ದೈವದ ನಟನೆಯನ್ನು ರಣವೀರ್ ಸಿಂಗ್ ಅಣಕವಾಡಿದ್ದಾರೆ. ಇದರಿಂದ ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ವಕೀಲ ಪ್ರಶಾಂತ್ ಮೇತಲ್ ದೂರು ನೀಡಿದ್ದಾರೆ. ಪೊಲೀಸರು ಘಟನೆ ನಡೆದ ಸ್ಥಳ ಗೋವಾಕ್ಕೆ ದೂರು ರವಾನೆ ಮಾಡಲು ನಿರ್ಧಾರ ಕೈಗೊಂಡಿದ್ದಾರೆ.
ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ನಟನೆ ಬಗ್ಗೆ ಮಾತನಾಡುತ್ತ ದೈವವನ್ನು ದೆವ್ವ ಎಂದು ಕರೆದು ವಿವಾದಕ್ಕೀಡಾಗಿದ್ದ ರಣವೀರ್ ಸಿಂಗ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕ್ಷಮೆ ಕೋರಿದ್ದರು. ಇದೀಗ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
