HomeLatest Newsರೈಲು ಪ್ರಯಾಣಿಕರೇ ಗಮನಿಸಿ: ಕೌಂಟರ್ ನಲ್ಲಿ 'ತತ್ಕಾಲ್' ಟಿಕೆಟ್ ಬುಕ್ ಮಾಡುವವರಿಗೆ ಒಟಿಪಿ ಕಡ್ಡಾಯ

ರೈಲು ಪ್ರಯಾಣಿಕರೇ ಗಮನಿಸಿ: ಕೌಂಟರ್ ನಲ್ಲಿ ‘ತತ್ಕಾಲ್’ ಟಿಕೆಟ್ ಬುಕ್ ಮಾಡುವವರಿಗೆ ಒಟಿಪಿ ಕಡ್ಡಾಯ

ನವದೆಹಲಿ: ತತ್ಕಾಲ್ ಟಿಕೆಟ್ ಬುಕಿಂಗ್ ನಲ್ಲಿ ನಕಲಿ ಟಿಕೆಟ್ ತಡೆಯಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ರೈಲ್ವೆ ಇಲಾಖೆ ರಿಸರ್ವೇಷನ್ ಕೌಂಟರ್ ನಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್ ಮಾಡುವವರಿಗೆ ಶೀಘ್ರವೇ ಒಟಿಪಿ ಕಡ್ಡಾಯ ಮಾಡಲಿದೆ.

ಪ್ರಸ್ತುತ 52 ರೈಲುಗಳ ತತ್ಕಾಲ್ ಟಿಕೆಟ್ ಬುಕಿಂಗ್ ನಲ್ಲಿ ಪ್ರಾಯೋಗಿಕವಾಗಿ ಈ ವಿಧಾನ ಚಾಲ್ತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ರೈಲುಗಳಿಗೂ ವಿಸ್ತರಿಸಲಾಗುವುದು.

ರಿಸರ್ವೇಷನ್ ಕೌಂಟರ್ ನಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್ ಮಾಡುವಾಗ ಪ್ರಯಾಣಿಕರ ವಿವರದ ಜೊತೆಗೆ ಕೊಡುವ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಈ ಒಟಿಪಿಯನ್ನು ಕೌಂಟರ್ ನಲ್ಲಿರುವ ಸಿಬ್ಬಂದಿಗೆ ನೀಡಬೇಕು. ಅವರು ಕಂಪ್ಯೂಟರ್ ನಲ್ಲಿ ನಮೂದಿಸಿದರೆ ಮಾತ್ರ ಟಿಕೆಟ್ ಬುಕ್ ಆಗುತ್ತದೆ. ಒಟಿಪಿ ಬಾರದಿದ್ದರೆ ಬುಕ್ ಆಗುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

IRCTC ವೆಬ್ ಸೈಟ್, ಆನ್ ಲೈನ್ ನಲ್ಲಿ ಟಿಕೆ ಬುಕ್ ಮಾಡುವವರಿಗೆ ಒಟಿಪಿ ಇರುವುದಿಲ್ಲ. ಅವರಿಗೆ ಈಗಾಗಲೇ ಆಧಾರ್ ಕಡ್ಡಾಯ ಮಾಡಲಾಗಿದೆ. ಇದು ಕೌಂಟರ್ ಗೆ ಟಿಕೆಟ್ ಗಳಿಗೆ ಮಾತ್ರ ಅನ್ವಯವಾಗಲಿದೆ. ತತ್ಕಾಲ್ ಟಿಕೆಟ್ ಲಭ್ಯತೆ ಹೆಚ್ಚಳಕ್ಕೆ ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular