ಬೆಂಗಳೂರು: ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಉತ್ತರ ವಿಭಾಗದ ಡಿಸಿಪಿ ನೇಮಗೌಡ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ.
ಕರ್ತವ್ಯ ಲೋಪ ಎಸಗಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯ ಎಎಸ್ಐ ಶ್ರೀನಿವಾಸಮೂರ್ತಿ, ಸುಬ್ರಹ್ಮಣ್ಯ ನಗರ ಠಾಣೆಯ ಎಎಸ್ಐ ಜಯರಾಮೇಗೌಡ, ಹೆಡ್ ಕಾನ್ಸ್ಟೇಬಲ್ ಧರ್ಮ, ಸಂಜಯನಗರ ಠಾಣೆಯ ಕಾನ್ಸ್ಟೇಬಲ್ ನಜೀರ್ ಅವರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಈ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಡಿಸಿಪಿ ಆದೇಶ ಹೊರಡಿಸಿದ್ದಾರೆ.
You Might Also Like
TAGGED:ಪೊಲೀಸ್
