ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು,ಖಾಸಗಿ ಬಸ್’ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ನಾಗಸಂದ್ರ ನಿವಾಸಿ ಸುಮಂತ್ ಗೌಡ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಈ ಅವಘಡ ನಡೆದಿದೆ.
ಸ್ನೇಹಿತನನ್ನ ನೋಡಲು ಸುಮಂತ್ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರುಗಡೆ ಹೋಗುತ್ತಿದ್ದ ಖಾಸಗಿ ಬಸ್ ನ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ಕೂಡಲೇ ಬೈಕ್ ನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಬಸ್ ಗೆ ಡಿಕ್ಕಿ ಹೊಡೆದು ಸುಮಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
