ಬೆಂಗಳೂರು : ಪತ್ನಿಯನ್ನ ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೇಬಿ (65) ಹಾಗೂ ವೆಂಕಟೇಶನ್ (65) ಮೃತರು ಎಂದು ಗುರುತಿಸಲಾಗಿದೆ.ಪತ್ನಿಗೆ ಸ್ಟ್ರೋಕ್ ಆಗಿ ಆಗಿ ವ್ಹೀಲ್ ಚೇರ್ ನಲ್ಲಿ ಓಡಾಡುತ್ತಿದ್ದರು. ಪತಿ ವೆಂಕಟೇಶನ್ ಬಿಎಂಟಿಸಿ ಬಸ್ ಚಾಲಕರಾಗಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು.
ಗಂಡ ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ವೈರ್ ನಿಂದ ಪತ್ನಿಯ ಕುತ್ತಿಗೆ ಬಿಗಿದು ನಂತರ ಪತಿ ಕೂಡ ಅದೇ ವೈರ್ ನಿಂದ ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
