ಬೆಂಗಳೂರು : ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ / ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ.ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇ.ಐವತ್ತರಷ್ಟು ಮಾತ್ರ) ರಷ್ಟು ರಿಯಾಯಿತಿ ನೀಡಿ ನವೆಂಬರ್ 21,2025 ರಿಂದ ಡಿಸೆಂಬರ್ 12, 2025ರ ವರೆಗೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಕಲಾವಕಾಶ ನೀಡಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.
ವಾಹನದ ಮಾಲೀಕರು ಈ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ದಂಡದ ಶೇ. 50ರಷ್ಟು ಮೊತ್ತವನ್ನು ಹತ್ತಿರದ ಹಿರಿಯ ಪ್ರಾದೇಶಿಕ ಸಾರಿಗೆ / ಪ್ರಾದೇಶಿಕ ಸಾರಿಗೆ / ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪಾವತಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಿದೆ.ಬೆಂಗಳೂರಿನಾದ್ಯಂತ ನಾಗರಿಕರು ಶೇ. 50 ರಷ್ಟು ರಿಯಾಯಿತಿಯೊಂದಿಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು ಜವಾಬ್ದಾರಿಯುತವಾಗಿ ಪಾವತಿಸುತ್ತಿದ್ದಾರೆ. ನೀವು ಬಾಕಿ ದಂಡ ಪಾವತಿಸಿ ಎಂದು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
13 ನೇ ದಿನ, ಮತ್ತು ನಗರದ ಪ್ರತಿಕ್ರಿಯೆ ಅದ್ಭುತವಾಗಿದೆ!
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) December 3, 2025
ಬೆಂಗಳೂರಿನಾದ್ಯಂತ ನಾಗರಿಕರು ಶೇ. 50 ರಷ್ಟು ರಿಯಾಯಿತಿಯೊಂದಿಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು ಜವಾಬ್ದಾರಿಯುತವಾಗಿ ಪಾವತಿಸುತ್ತಿದ್ದಾರೆ – ಮತ್ತು ಅಂಕಿ-ಅಂಶಗಳೇ ಎಲ್ಲವನ್ನೂ ಹೇಳುತ್ತಿವೆ! pic.twitter.com/4mJ5sNRKQZ
