ಬೆಂಗಳೂರು : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಲ್ಯಾಪ್ ಟಾಪ್ ಯೋಜನೆಯಡಿ ಸಫಾಯಿ ಕರ್ಮಚಾರಿ/ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಮತ್ತು ಅವರ ಅವಲಂಬಿತ ಮಕ್ಕಳು B.Com, B.Sc. BBM, MBBS, M.Com, MA, M.Sc, M.Tech, MBA ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, #48, 2ನೇ ಮುಖ್ಯರಸ್ತೆ, ಪ್ಯಾಲೇಸ್ ಗುಟ್ಟಹಳ್ಳಿ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಡಿಸೆಂಬರ್ 16, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29550603 ಗೆ ಸಂರ್ಪಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
