ನವದೆಹಲಿ: ಬಿಜೆಪಿ ನಾಯಕಿ, ಮಾಜಿ ಸಚಿವೆ ದಿ.ಸುಷ್ಮಾ ಸ್ವರಾಜ್ ಪತಿ ಕೌಶಲ್ ಸ್ವರಾಜ್ ವಿಧಿವಶರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಮಿಜೋರಾಮ್ ಮಾಜಿ ರಾಜ್ಯಪಾಲರಾಗಿದ್ದ ಕೌಶಲ್ ಸ್ವರಾಜ್ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಕೌಶಲ್ ಸ್ವರಾಜ್ ವಿಧಿವಶರಾಗಿರುವ ಬಗ್ಗೆ ಪುತ್ರಿ ಸಂಸದೆ ಶ್ರುತಿ ಬಾನ್ಸುರಿ ಸ್ವರಾಜ್ ಮಾಹಿತಿ ನೀಡಿದ್ದಾರೆ.
ಕೌಶಲ್ ಸ್ವರಾಜ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಲೋಧಿರಸ್ತೆಯಲ್ಲಿರುವ ಸ್ಮಶಾನದಲ್ಲಿ ಕೌಶಲ್ ಸ್ವರಾಜ್ ಅಂತ್ಯಕ್ರಿಯೆ ನಡೆಯಲಿದೆ.
