ಬೆಂಗಳೂರು: ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮಹಿಳೆಯರಿಗೆ 30,000 ರೂ.ನಿಂದ 3 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವೈಯಕ್ತಿಕ ಸಾಲವನ್ನು 6 ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವಂತೆ ಬ್ಯಾಂಕುಗಳಿಗೆ ಮನವಿ ಮಾಡಿದ್ದಾರೆ. ಮೊದಲು ನೋಂದಣಿ ಮಾಡಿಕೊಂಡವರಿಗೆ ಸಾಲ ಸೌಲಭ್ಯ ಸಿಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿ ದರದ ಅನ್ವಯ ಕಡಿಮೆ ದರದಲ್ಲಿ ಸಾಲ ಸೌಲಭ್ಯ ಸಿಗಲಿದೆ. ಕೇವಲ ಆರು ತಿಂಗಳಲ್ಲಿ ಸಾಲ ಸಿಗಲಿದ್ದು, ತಿಂಗಳಿಗೆ 200 ರೂಪಾಯಿಯಂತೆ 6 ತಿಂಗಳು ಹಣ ಕಟ್ಟಿದರೆ ಸದಸ್ಯತ್ವ ಸಿಗುತ್ತದೆ ಎಂದು ತಿಳಿಸಿದ್ದಾರೆ.
You Might Also Like
TAGGED:ಗೃಹಲಕ್ಷ್ಮಿ
