ನವದೆಹಲಿ: ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್ಪೋರ್ಟ್ ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಗಮಿಸಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯ ಸ್ವಾಗತ ನೀಡಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಬಂದಿಳಿದ ವೇಳೆ ಮೋದಿ ಸ್ವಾಗತಿಸಿದ್ದಾರೆ.
ಅಧ್ಯಕ್ಷ ಪುಟಿನ್ ಎರಡು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಡಿಸೆಂಬರ್ 5 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಲಿದ್ದಾರೆ.
ನಾಲ್ಕು ವರ್ಷಗಳಲ್ಲಿ ರಷ್ಯಾದ ನಾಯಕ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿ ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಂಬಂಧಗಳಲ್ಲಿ ಹೊಸ ಹಂತದ ಸುಧಾರಣೆ ತರಲಿದೆ.

