ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದು, ವಿಶೇಷ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದಾರೆ.
ದೆಹಲಿಯ ಪಾಲಂ ಏರ್ ಪೋರ್ಟ್ ಗೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಏರ್ ಪೋರ್ಟ್ ಗೆ ತೆರಳಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ 23ನೇ ಭಾರತ ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಪುಟಿನ್ ದೆಹಲಿಗೆ ಆಗಮಿಸಿದ್ದು, ರಷ್ಯಾ ಅಧ್ಯಕ್ಷರ ಭಾರತ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
