ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತದ ಅಧಿಕೃತ ಪ್ರವಾಸ ಆರಂಭವಾಗಿದೆ. ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪುಟಿನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ವಿಮಾನ ನಿಲ್ದಾಣದಿಂದ ಒಂದೇ ಕಾರ್ ನಲ್ಲಿ ಮೋದಿ ಮತ್ತು ಪುಟಿನ್ ಪ್ರಯಾಣ ಬೆಳೆಸಿದ್ದಾರೆ.
ಪಾಲಂ ವಿಮಾನ ನಿಲ್ದಾಣದಲ್ಲಿ ಪುಟಿನ್ ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಖುದ್ದು ಪ್ರಧಾನಿ ಮೋದಿ ಅವರೇ ಪುಟಿನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಧಾನಿ ಮೋದಿ ಮತ್ತು ಪುಟಿನ್ ಪ್ರಧಾನಿ ನಿವಾಸದತ್ತ ಪ್ರಯಾಣ ಬೆಳೆಸಿದ್ದಾರೆ. ಪ್ರಧಾನಿ ನಿವಾಸದಲ್ಲಿ ಇಂದು ರಾತ್ರಿ ಪುಟಿನ್ ಅವರಿಗೆ ಮೋದಿ ಭೋಜನಕೂಟ ಆಯೋಜಿಸಿದ್ದಾರೆ.

