HomeLatest Newsನಾಳೆ ಎಲ್ಲ ಕಚೇರಿಗಳಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನ’ ಆಚರಣೆ ಕಡ್ಡಾಯ

ನಾಳೆ ಎಲ್ಲ ಕಚೇರಿಗಳಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನ’ ಆಚರಣೆ ಕಡ್ಡಾಯ

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಡಿಸೆಂಬರ್ 06 ರಂದು ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಕಡ್ಡಾಯವಾಗಿ ಆಚರಿಸುವಂತೆ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿರ್ದೇಶನ ನೀಡಿದ್ದಾರೆ.

 ಈ ಕುರಿತು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶಿಸಿರುವ ಅವರು, ಡಿಸೆಂಬರ್ 06, 2025 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲ ಕಚೇರಿಗಳಲ್ಲಿ ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾರ್ಚನೆ ಮಾಡಿ, ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ, ಸಂಸ್ಥೆಗಳಲ್ಲಿ ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಕಡ್ಡಾಯವಾಗಿ ಆಚರಿಸಲು ಸೂಚಿಸುವಂತೆ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular