HomeLatest News'ಹಳೆ ಪಿಂಚಣಿ ಯೋಜನೆ' ಮರು ಜಾರಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ವಾರಾಂತ್ಯದೊಳಗೆ ‘ಒಪಿಎಸ್’...

‘ಹಳೆ ಪಿಂಚಣಿ ಯೋಜನೆ’ ಮರು ಜಾರಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ವಾರಾಂತ್ಯದೊಳಗೆ ‘ಒಪಿಎಸ್’ ವರದಿ ಸಲ್ಲಿಕೆ

ಬೆಂಗಳೂರು: ಹಳೆಯ ಪಿಂಚಣಿ ಯೋಜನೆ(OPS) ಮರು ಜಾರಿಗೊಳಿಸುವ ಸಂಬಂಧ ಸರ್ಕಾರ ರಚಿಸಲಾಗಿದ್ದ ಸಮಿತಿಯಿಂದ ವಾರಾಂತ್ಯದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ಹಳೆ ಪಿಂಚಣಿ ಯೋಜನೆ ಮರು ಜಾರಿ ಬಗ್ಗೆ ಅಧಿಕಾರಿಗಳು ಹಾಗೂ ಸಮಿತಿ ಮುಖ್ಯಸ್ಥರ ಭೇಟಿಯಾದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ತಿಳಿಸಿದ್ದಾರೆ.

ಕರ್ನಾಟ ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆಯನ್ನು (NPS)ಹೋಗಲಾಡಿಸಿ ಈ ಹಿಂದಿನ ಹಳೆಯ ಪಿಂಚಣಿ ಯೋಜನೆಯನ್ನು (OPS) ಜಾರಿಗೊಳಿಸುವ ಸಂಬಂಧ, OPS ಯೋಜನೆ ಜಾರಿಗೊಳಿಸಿರುವ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವು ಸಮಿತಿಯನ್ನು ರಚಿಸಿತ್ತು. ಈ ಸಂಬಂಧ ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸುವಂತೆ ಸಂಘವು ಸಮಿತಿಯನ್ನು ಒತ್ತಾಯಿಸುತ್ತಲೇ ಬಂದಿತ್ತು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಪದಾಧಿಕಾರಿಗಳ ನಿಯೋಗವು NPS ಸಮಿತಿಯ ಸದಸ್ಯರು ಹಾಗೂ ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಡಾ| ಎಂ.ಟಿ. ರೇಜುರವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಂದರ್ಭದಲ್ಲಿ; ಇಡೀ ರಾಜ್ಯದ ನೌಕರರು NPS ರದ್ದುಪಡಿಸುವ ಸಂಬಂಧ ಒತ್ತಡ ಹಾಕುತ್ತಿದ್ದಾರೆ ಎಂಬ ಅಂಶವನ್ನೂ ಗಮನಕ್ಕೆ ತರಲಾಯಿತು. ಸಮಿತಿಯು ಈಗಾಗಲೇ ವರದಿಯನ್ನು ಸಿದ್ಧಪಡಿಸಿದ್ದು, ಈ ಸಂಬಂಧ ಒಂದು ವಾರದೊಳಗೆ ಸಮಿತಿಯ ಸಭೆಯನ್ನು ಏರ್ಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದಾಗಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

NPS ಸಮಿತಿಯು ನೀಡಲಿರುವ ವರದಿಯನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪರಾಮರ್ಶಿಸಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಮಾಡಲಾಗಿದ್ದ ಘೋಷಣೆ ಹಾಗೂ ಸಂಘದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಮಿತಿ ವರದಿ ನೀಡಿದ ಕೊಡಲೇ ಕ್ರಮವಹಿಸುವುದಾಗಿ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರಿ ನೌಕರರಿಗೆ ಈ ಹಿಂದಿನಂತೆ ಹಳೆಯ ಪಿಂಚಣಿ ಯೋಜನೆಯನ್ನು(OPS) ಮರು ಜಾರಿಗೊಳಿಸುವಂತೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘವು ಮತ್ತೊಮ್ಮೆ ಮನವಿ ಮಾಡುತ್ತದೆ ಎಂದು ಷಡಕ್ಷರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular