HomeLatest NewsBIG NEWS: ರಾಜ್ಯದ 800 ಸರ್ಕಾರಿ ಶಾಲೆಗಳು 'ಕೆಪಿಎಸ್' ಆಗಿ ಮೇಲ್ದರ್ಜೆಗೆ: ಸಂಪುಟ ಸಭೆ ಮಹತ್ವದ...

BIG NEWS: ರಾಜ್ಯದ 800 ಸರ್ಕಾರಿ ಶಾಲೆಗಳು ‘ಕೆಪಿಎಸ್’ ಆಗಿ ಮೇಲ್ದರ್ಜೆಗೆ: ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ 800 ಸರ್ಕಾರಿ ಶಾಲೆಗಳನ್ನು 3200 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್) ಶಾಲೆಗಳಾಗಿ ಉನ್ನತೀಕರಿಸಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತಾಗಿ ವಿಸ್ತೃತ ಯೋಜನೆ ವರದಿ ತಯಾರಿಸಲು ಅರ್ಹ ಸಂಸ್ಥೆಯನ್ನು ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಆಯುಕ್ತರಿಗೆ ಅಧಿಕಾರ ನೀಡಲು ಸಂಪುಟ ಸಭೆ ನಿರ್ಧರಿಸಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, 800 ಪ್ರಮುಖ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತಿಕರಿಸಲು ತೀರ್ಮಾನಿಸಲಾಗಿದೆ. ಕೆಪಿಎಸ್ ಗೆ ಶಾಲೆಗಳನ್ನು ಉನ್ನತೀಕರಿಸುವ ವೇಳೆ ಕೆಲವು ಶಾಲೆಗಳನ್ನು ವಿಲೀನ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular