HomeLatest Newsವಾಹನ ಸವಾರರಿಗೆ ಗುಡ್ ನ್ಯೂಸ್: ದೇಶಾದ್ಯಂತ ಹೆದ್ದಾರಿಗಳಲ್ಲಿ ತಡೆರಹಿತ ಪ್ರಯಾಣಕ್ಕೆ 'ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆ' ಜಾರಿ

ವಾಹನ ಸವಾರರಿಗೆ ಗುಡ್ ನ್ಯೂಸ್: ದೇಶಾದ್ಯಂತ ಹೆದ್ದಾರಿಗಳಲ್ಲಿ ತಡೆರಹಿತ ಪ್ರಯಾಣಕ್ಕೆ ‘ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆ’ ಜಾರಿ

ನವದೆಹಲಿ: ಹೆದ್ದಾರಿಗಳಲ್ಲಿ ತಡೆರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಇನ್ನೊಂದು ವರ್ಷದಲ್ಲಿ ದೇಶಾದ್ಯಂತ ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಹೆದ್ದಾರಿಗಳಲ್ಲಿ ವಾಹನ ಸವಾರರಿಗೆ ಅಡೆತಡೆ ಇಲ್ಲದೆ ಪ್ರಯಾಣಕ್ಕೆ ಅವಕಾಶ ಖಾತರಿಪಡಿಸುವುದು ಇದರ ಉದ್ದೇಶವಾಗಿದೆ. ಹತ್ತು ಸ್ಥಳಗಳಲ್ಲಿ ಪ್ರಾಯೋಗಿಕವಾಗಿ ಹೊಸ ತಡೆರಹಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೊಳಿಸಲಾಗಿದೆ. ವರ್ಷದೊಳಗೆ ಇಡೀ ದೇಶಕ್ಕೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಿರುವ ಟೋಲ್ ವ್ಯವಸ್ಥೆ ಕೊನೆಯಾಗಲಿದೆ, ಯಾರೂ ವಾಹನ ತಡೆಯುವುದಿಲ್ಲ. ಎಲೆಕ್ಟ್ರಾನಿಕ್ ಸುಂಕ ಸಂಗ್ರಹ ವ್ಯವಸ್ಥೆಯನ್ನು ದೇಶಾದ್ಯಂತ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular