ನವದೆಹಲಿ: ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ರಾಷ್ಟ್ರಪತಿ ಭವನಕ್ಕೆ ಆಗಮಿಸಿ ಸೇನಾಪಡೆಗಳಿಂದ ಗೌರವ ಸ್ವೀಕರಿಸಿದ ಬಳಿಕ ರಾಜ್ ಘಾಟ್ ಗೆ ತೆರಳಿದರು.
ರಾಜ್ ಘಾಟ್ ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು.
ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸೇನಾಪಡೆಗಳು ಗೌರವ ಸಲ್ಲಿಸಿದವು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸ್ವಾಗಿತಿಸಿದರು.
ರಾಷ್ಟ್ರಪತಿ ಭಾವನದಿಂದ ರಾಜ್ ಘಾಟ್ ಗೆ ತೆರಳಿತ ಪುಟಿನ್ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಇಂದು ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಔತಣಕೂಟ ಆಯೋಜಿಸಲಾಗಿದೆ.
