ಧಾರವಾಡ : 2025-26 ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಧಾರವಾಡ ಮತ್ತು ಅಳ್ನಾವರ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ತುಂತುರು ಹಾಗೂ ಹನಿ ನೀರಾವರಿ ಘಟಕಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಧಾರವಾಡ, ಅಮ್ಮಿನಭಾವಿ, ಗರಗ ಮತ್ತು ಅಳ್ನಾವರ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ ಅಣಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
