ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್, ಡ್ರಗ್ಸ್ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಮಾದಕ ವಸ್ತುಗಳ ವಿರುದ್ಧ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಈ ವರ್ಷ 5500 ಡ್ರಗ್ಸ್ ಪ್ರಕರಣಗಳು ದಾಖಲಾಗಿವೆ. ನೂರಾರು ಕೋಟಿ ಮೌಲ್ಯದ ಡ್ರಗ್ಸ್ ಗಳನ್ನು ಜಪ್ತಿ ಮಾಡಲಾಗಿದೆ ಎಂದರು.
ಬೆಂಗಳೂರಿನಲ್ಲಿ 1447 ಕೆಜಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 162 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ನೂರಾರು ವಿದೇಶಿ ಡ್ರಗ್ಸ್ ಪೆಡ್ಲರ್ ಗಳನ್ನು ಕೂಡ ಬಂಧಿಸಲಾಗಿದೆ ಎಂದು ತಿಳಿಸಿದರು.
