ALERT : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಪ್ರಕಟಣೆ.!

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ( Kempegowda Airport) ಪ್ರಯಾಣಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ.

ಏನಿದು ಪ್ರಕಟಣೆ..?

ಪ್ರಯಾಣಿಕರ ಗಮನಕ್ಕೆ

ಡಿಸೆಂಬರ್ 5, 2025ರ 23:59 ಗಂಟೆಯವರೆಗೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಿಂದ ಮುಂಬೈ ಮತ್ತು ದೆಹಲಿಗೆ ತೆರಳುವ ಇಂಡಿಗೋ ವಿಮಾನಗಳು ರದ್ದುಗೊಂಡಿವೆ.

ಇಂಡಿಗೋ ವಿಮಾನಗಳ ಮೂಲಕ ಇತರ ಸ್ಥಳಗಳಿಗೆ ಪ್ರಯಾಣಿಸಲಿರುವ ಪ್ರಯಾಣಿಕರು, ದಯವಿಟ್ಟು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ ನೇರವಾಗಿ ವಿಮಾನಯಾನ ಸಂಸ್ಥೆಯೊಂದಿಗೆ ತಮ್ಮ ವಿಮಾನದ ಇತ್ತೀಚಿನ ಸ್ಥಿತಿಯನ್ನು ಪರಿಶೀಲಿಸುವಂತೆ ವಿನಂತಿ ಮಾಡುತ್ತೇವೆ.

ಈ ಅಡಚಣೆಯಿಂದಾಗುವ ಅನಾನುಕೂಲತೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣಿಕರಿಗೆ ನೆರವಾಗಲು ಇಂಡಿಗೋ ಹಾಗೂ ಕಾರ್ಯಾಚರಣಾ ಸಹಯೋಗ ಹೊಂದಿರುವ ಇತರ ಸಂಸ್ಥೆಗಳ ಜೊತೆಗೆ ನಮ್ಮ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ..

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read