ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ನೀಡಲಾಗಿದೆ.
ದೆಹಲಿ ಪೊಲೀಸರು ಡಿಸಿಎಂ ಡಿಕೆಗೆ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಡಿಸೆಂಬರ್ 19 ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಹಣಕಾಸು ಮತ್ತು ವಹಿವಾಟಿನ ವಿವರಗಳನ್ನು ಕೋರಿ ನೋಟಿಸ್ ನೀಡಲಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ಯಂಗ್ ಇಂಡಿಯಾ ಜೊತೆಗಿನ ಹಣಕಾಸು ಮತ್ತು ವಹಿವಾಟಿನ ಮಾಹಿತಿ ಕೋರಿ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಿದೆ.
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಪ್ರಮುಖ ಮಾಹಿತಿ ಹೊಂದಿದ್ದಾರೆ ಎಂದು ಹೇಳಲಾಗಿದ್ದು, ಡಿಸೆಂಬರ್ 19ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಕೋರಲಾದ ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.
