BREAKING: ಬ್ಯಾನರ್ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಬಜರಂಗದಳ ಕಾರ್ಯಕರ್ತರಿಂದ ಕೃತ್ಯ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ಬಜರಂಗದಳ ಕಾರ್ಯಕರ್ತರು ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ.

ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಗಣೇಶ್ ಮೇಲೆ ಸಂಜಯ್, ಮಿಥುನ್ ಮಚ್ಚಿನಿಂದ ದಾಳಿ ನಡೆಸಿದ್ದಾರೆ. ತಲೆ, ಕುತ್ತಿಗೆ ಹಾಗೂ ದೇಹದ ಭಾಗಗಳಿಗೆ ಮಚ್ಚಿನಿಂದ ದಾಳಿ ನಡೆಸಲಾಗಿದ್ದು, ಗಲಾಟೆಯಲ್ಲಿ ಬಜರಂಗದಳ ಕಾರ್ಯಕರ್ತ ಸಂಜಯನಿಗೂ ಗಾಯಗಳಾಗಿವೆ.

ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಂಜಯ್ ದಾಖಲಾಗಿದ್ದು, ಮಿಥುನ್ ಪರಾರಿಯಾಗಿದ್ದಾನೆ. ಚಿಕ್ಕಮಗಳೂರಿನ ಸಖರಾಯಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ದತ್ತ ಜಯಂತಿ ಮುಗಿದ ಹಿನ್ನೆಲೆ ಸಖರಾಯಪಟ್ಟಣ ಬಸ್ ನಿಲ್ದಾಣ ಬಳಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಬಜರಂಗದಳ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಆಮ್ಟೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ದುಷ್ಕರ್ಮಿಗಳು ಗಣೇಶ್ ಗೌಡ ಎಂಬುವವರನ್ನು ಹತ್ಯೆ ಮಾಡಿದ್ದಾರೆ. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಗಲಾಟೆಯಲ್ಲಿ ಭಾಗಿಯಾದ ಒಬ್ಬರು ಜಿಲ್ಲಾಪತ್ರೆಗೆ ದಾಖಲಾಗಿದ್ದಾರೆ. ಸಖರಾಯಪಟ್ಟಣ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read