ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟಿಸ್ ನೀಡಲಾಗಿದೆ.
ಡಿಸೆಂಬರ್ 8 ರಂದು ವಿಚಾರಣೆಗೆ ಹಾಜರಾಗುವಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲಾ ವರ್ಗೀಸ್ ನೋಟಿಸ್ ನೀಡಿದ್ದಾರೆ. ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.
ಪುತ್ತೂರು ಎಸಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ಅವರಿಗೆ ಸೂಚನೆ ನೀಡಲಾಗಿದೆ. ಈ ಹಿಂದೆ ಪುತ್ತೂರು ಎಸಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶಿಸಿದ್ದರು. ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದರು. ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್ ಸೆಕ್ಷನ್ ಸರಿಪಡಿಸಿ ಹೊಸ ಆದೇಶ ನೀಡುವಂತೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಡಿಸೆಂಬರ್ 8ರಂದು ಪುತ್ತೂರು ಎಸಿ ಮುಂದೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದ್ದು, ಹೊಸದಾಗಿ ದಾಖಲಾಗಿದ್ದ ಪ್ರಕರಣಗಳನ್ನು ಸೇರಿಸಿ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.
