HomeLatest NewsGOOD NEWS: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 4500 ಕಾನ್ಸ್ಟೇಬಲ್ ನೇಮಕಾತಿಗೆ ಅನುಮತಿ

GOOD NEWS: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 4500 ಕಾನ್ಸ್ಟೇಬಲ್ ನೇಮಕಾತಿಗೆ ಅನುಮತಿ

ಬೆಂಗಳೂರು: ರಾಜ್ಯದಲ್ಲಿ 4,500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಒಳ ಮೀಸಲಾತಿ ಪ್ರಕ್ರಿಯೆ ಕಾರಣ ಸುಮಾರು 75 ಸಾವಿರ ಹುದ್ದೆ ಭರ್ತಿ ಸಾಧ್ಯವಾಗಿರಲಿಲ್ಲ. ಇದೀಗ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ನಿರ್ಧಾರ ಅಂತಿಮವಾದಲ್ಲಿ ಎರಡನೇ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ 4500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ನೇಮಕಾತಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ, ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದಲ್ಲಿ ಅಂತಹ ಸಿಬ್ಬಂದಿ, ಅಧಿಕಾರಿಗಳನ್ನು ಅಮಾನತು ಅಥವಾ ಸೇವೆಯಿಂದ ವಜಾ ಮಾಡಲಾಗುತ್ತಿದೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular