HomeLatest NewsBREAKING: ಆದಾಯ ತೆರಿಗೆ ಪ್ರಕರಣದಲ್ಲಿ ನಟ ಯಶ್ ಗೆ ರಿಲೀಫ್: ಐಟಿ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್...

BREAKING: ಆದಾಯ ತೆರಿಗೆ ಪ್ರಕರಣದಲ್ಲಿ ನಟ ಯಶ್ ಗೆ ರಿಲೀಫ್: ಐಟಿ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಆದಾಯ ತೆರಿಗೆ ಪ್ರಕರಣದಲ್ಲಿ ನಟ ಯಶ್ ಅವರಿಗೆ ರಿಲೀಫ್ ಸಿಕ್ಕಿದೆ. ಐಟಿ ಇಲಾಖೆ ನೀಡಿದ್ದ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ನಟ ಯಶ್ ಅವರ ಆದಾಯ ತೆರಿಗೆಗೆ ಸಂಬಂಧಿಸಿದಂತೆ  2013-14 ರಿಂದ 2018 -19ರ ಅವಧಿಗೆ ನೀಡಿದ್ದ ನೋಟಿಸ್ ರದ್ದು ಮಾಡಲಾಗಿದೆ. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ನ್ಯಾಯಪೀಠದಿಂದ ಆದೇಶ ನೀಡಲಾಗಿದೆ.

ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿದ್ದ ನಟ ಯಶ್, ಆದಾಯ ತೆರಿಗೆ ಇಲಾಖೆಯವರು ಕರೆದಾಗ ಇಲ್ಲ ಎನ್ನಲು ಆಗುವುದಿಲ್ಲ ಎಂದು ಹೇಳಿದ್ದು ಗಮನಸೆಳೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಯಶ್ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ದಾಖಲೆ ವಶಕ್ಕೆ ಪಡೆದಿದ್ದು, ಹೈಕೋರ್ಟ್ ನಲ್ಲಿ ಆದಾಯ ತೆರಿಗೆ ನೋಟಿಸ್ ಬಗ್ಗೆ ಯಶ್ ಅರ್ಜಿ ಸಲ್ಲಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular