ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ಮಾದಕ ವಸ್ತು ಪತ್ತೆಯಾದ ವಾರ್ಡರ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್ ರಾಹುಲ್ ನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು ಪ್ರತಿಭಟನೆ ನಡೆಸಿದ್ದರು.
ಇತ್ತೀಚಿನ ವಿಶೇಷ ಶೋಧ ಕಾರ್ಯಾಚರಣೆಯಲ್ಲಿ ಸಿಗರೇಟ್, ನಿಷೇಧಿತ ವಸ್ತು. ಮೊಬೈಲ್ ಪತ್ತೆಯಾಗಿತ್ತು. ಜೈಲಿನಲ್ಲಿನ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ನಂತರ, ಸರ್ಕಾರ ಜೈಲು ಆಡಳಿತದಲ್ಲಿ ಬದಲಾವಣೆ ಮಾಡಿ ಅಂಶುಕುಮಾರ್ ಅವರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಿಸಿತ್ತು. . ಅವರ ನಿರ್ದೇಶನದಂತೆ ಜೈಲಿನಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಹಾಗೂ ಇತರ ನಿಷೇಧಿತ ವಸ್ತುಗಳ ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿತ್ತು
