ಚಿಕ್ಕಬಳ್ಳಾಪುರ: ಪ್ರೀತಿ-ಪ್ರೇಮದ ವಿಚಾರವಾಗಿ ಆರಂಭವಾದ ಗಲಾಟೆ ಯುವಕನ ಹತ್ಯೆಯಲ್ಲಿ ಕೊನೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಆಟೋದಲ್ಲಿ ಹೋಗುತ್ತಿದ್ದ ಯುವಕನನ್ನು ಕಾರಿನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಆಟೋ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಠಾಣೆಯ ಬಳಿಯೇ ಈ ಘಟನೆ ನಡೆದಿದೆ.
ಪವನ್ (28) ಕೊಲೆಯಾದ ಯುವಕ. ವೃತ್ತಿಯಲ್ಲಿ ಆಟೋ ಚಾಲಕ. ದೊಡ್ದಬಳ್ಳಾಪುರದ ಡಿ ಕ್ರಾಸ್ ಬಳಿಯ ಟಿಬಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಯುವಕನನ್ನು ಹತ್ಯೆ ಮಾಡಿದ್ದಾರೆ. ಯುವತಿಯ ವಿಚಾರವಾಗಿ ಈ ಹಿಂದೆ ನಡೆದಿದ್ದ ಗಲಾಟೆ ದ್ವೇಷಕ್ಕೆ ತಿರುಗಿದ್ದು ಇದೇ ಕಾರಣಕ್ಕೆ ಯುವಕನನ್ನು ಹತ್ಯೆ ಮಾಡಲಾಗಿದೆ ಎಂದು ಪವನ್ ಕುಟುಂಬದವರು ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
