HomeLatest NewsBREAKING: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

BREAKING: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ಎಂಬಾತ ಡಿಸೆಂಬರ್ 3ರಂದು 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಇಂದು ಪೊಲೀಸರಿಗೆ ಶರಣಗಾಲು ಬರುತ್ತಿದ್ದ ವೇಳೆ ಆತನನ್ನು ಹಿಡಿದ ಗ್ರಾಮಸ್ಥರು ನಡುರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಬಿಳಿಕೆರೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular