BIG NEWS: ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ; ಇದು ಖಂಡನೀಯ: ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಡಿ ಸಮನ್ಸ್ ವಿಚಾರವಾಗಿ ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇಡಿ ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಲಯದಲ್ಲಿ ಹೋರಾಟ ಮಾಡುತ್ತೇವೆ ಎಂದರು.

ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ ಗೆ ಇಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್ 19ರೊಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ ಎಂದರು.

ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡಲು ಪಿಎಂಎಲ್ ಎ ಪ್ರಕರಣ ಕೂಡ ದಾಖಲಿಸಿದ್ದರು. ಆನಂತರ ಏನಾಯಿತು? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಜತೆಗೆ ಗೊಂದಲ ಮೂಡಿಸುವುದು ಇದರ ಉದ್ದೇಶ ಎಂದರು.

ನ್ಯಾಷನಲ್ ಹೆರಾಲ್ಡ್, ಯಂಗ್ ಇಂಡಿಯಾ ಇವು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕರು ಸಹಾಯ ಮಾಡಿದ್ದಾರೆ ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read